12:32 PM Thursday 28 - August 2025

ವಿವಾದಾತ್ಮಕ ಹೇಳಿಕೆ: ನಟಿ ರಚಿತಾ ರಾಮ್ ಗೆ ಸಂಕಷ್ಟ!

rachitha ram
21/01/2023

ನಟಿ ರಚಿತಾ ರಾಮ್ ಅವರು ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರಕರಣಗಳು ದಾಖಲಾಗುವ ಸಾಧ್ಯತೆಗಳು ಕಂಡು ಬಂದಿದೆ.

ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ಮಾತನಾಡಿದ್ದ ರಚಿತಾ ರಾಮ್, ಪ್ರತೀ ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಆದರೆ ಈ ಬಾರಿ ಗಣರಾಜ್ಯೋತ್ಸವ ಮರೆತು ಕ್ರಾಂತಿಯೋತ್ಸವ ಮಾಡಿ ಎಂದು ಕರೆ ನೀಡಿದ್ದರು.

ರಚಿತಾ ರಾಮ್ ಅವರ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಬೆಂಗಳೂರು ಮಂಡ್ಯ, ಮೈಸೂರಿನಲ್ಲಿ ನಟಿಯ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ. ರಾಜ್ಯದ ಇನ್ನಷ್ಟು ಜಿಲ್ಲೆಗಳಲ್ಲಿ ನಟಿಯ ವಿರುದ್ಧ ದೂರು ದಾಖಲಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ರಚಿತಾ ರಾಮ್ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಜನರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇತಿಹಾಸ ಗೊತ್ತಿಲ್ಲದೇ ಬಾಯಿಗೆ ಬಂದಂತೆಲ್ಲ, ಹೇಳಿಕೆ ನೀಡುವುದು ಸರಿಯಲ್ಲ, ತಮ್ಮ ಹೇಳಿಕೆಗೆ ತಕ್ಷಣವೇ ಕ್ಷಮೆ ಯಾಚಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಣ ರಾಜ್ಯೋತ್ಸವ ಅಂದ್ರೆ ಇಡೀ ದೇಶವೇ ಹೆಮ್ಮೆಪಡುವ ದಿನ, ಅಂತಹ ದಿನವನ್ನು ಮರೆತು ಒಂದು ಸಿನಿಮಾ ನೋಡಿ ಎಂದು ಕರೆ ನೀಡುವುದು ಎಷ್ಟು ಸರಿ? ಎಂಬ ಪ್ರಶ್ನೆ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version