ದರ್ಶನ್ ಗೆ ಸಂಕಷ್ಟ: ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡುತ್ತಿರುವ ಫೋಟೋ, ವಿಡಿಯೋ ಬಹಿರಂಗಗೊಂಡ ಬೆನ್ನಲ್ಲೇ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಜಿ&ಐಜಿಪಿ ಅಲೋಕ್ ಮೋಹನ್ ಅವರಿಂದ ಮಾಹಿತಿ ಪಡೆದು ಖಡಕ್ ಸೂಚನೆ ನೀಡಿದ್ದು, ಕೂಡಲೇ ದರ್ಶನ್ ಮತ್ತು ಇತರರನ್ನು ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಸಿಎಂ ಹೇಳಿದಿಷ್ಟು:
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ.
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: