ರಾಜ್ಯ ಹೆದ್ದಾರಿಯಲ್ಲಿನ ಗುಂಡಿಗಳಿಂದ ಬೇಸತ್ತು ಮಣ್ಣು ಮುಚ್ಚಿದ ಲಾರಿ ಚಾಲಕರು!

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ–ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿಯಲ್ಲಿನ ಗುಂಡಿಗಳು ಸ್ಥಳೀಯರು ಮತ್ತು ಚಾಲಕರಿಗೆ ತೀವ್ರ ತೊಂದರೆ ಉಂಟುಮಾಡುತ್ತಿವೆ.
ಗುಂಡಿಗಳಿಂದ ಬೇಸತ್ತ ಲಾರಿ ಚಾಲಕರು ಸ್ವಯಂಪ್ರೇರಿತವಾಗಿ ಮಣ್ಣು ತಂದು ಗುಂಡಿಗಳನ್ನು ಮುಚ್ಚಿದ್ದಾರೆ. ಸ್ಥಳೀಯರು ಮತ್ತು ಕಾಂಗ್ರೆಸ್ ಮುಖಂಡರು ಅರಣ್ಯ ಇಲಾಖೆಯನ್ನು ಸಂಪರ್ಕಿಸಿ, ರಸ್ತೆ ದುರಸ್ತಿಗೆ ಅಡ್ಡಿಪಡಿಸದಂತೆ ಮನವಿ ಮಾಡಿದ್ದಾರೆ.
ಅರಣ್ಯಾಧಿಕಾರಿಗಳು, ರಸ್ತೆ ನಿರ್ವಹಣೆಗೆ ತಕರಾರು ಮಾಡಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ರಸ್ತೆ ಪಕ್ಕದ ಮರಗಳನ್ನು ಜೆಸಿಬಿ ಬಳಸಿ ತೆರವು ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಳಪೆ ರಸ್ತೆಗಳಿಂದ ಸಾರ್ವಜನಿಕರು ಮತ್ತು ವಾಹನ ಸವಾರರು ತೀವ್ರ ಅಸಮಾಧಾನಗೊಂಡಿದ್ದಾರೆ. ಅಧಿಕಾರಿಗಳು ಕಾಮಗಾರಿಗೆ ಹಣವಿದೆ ಎಂದು ಹೇಳಿದರೂ, ಕೆಲಸ ಮಾತ್ರ ನಡೆಯುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: