ಬಸ್ ಗೆ ಜಲ್ಲಿ ಕಲ್ಲು ತುಂಬಿದ್ದ ಟ್ರಕ್ ಡಿಕ್ಕಿ: 18 ಮಂದಿಯ ದಾರುಣ ಸಾವು
ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿಯಲ್ಲಿ ಪ್ರಯಾಣಿಕರ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 18 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ರಂಗಾರೆಡ್ಡಿ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಹೈದರಾಬಾದ್–ಬಿಜಾಪುರ ಹೆದ್ದಾರಿಯಲ್ಲಿ ಸುಮಾರು 70 ಪ್ರಯಾಣಿಕರಿದ್ದ ಪ್ರಯಾಣಿಕರ ಬಸ್ ಗೆ ಸರಕು ಸಾಗಾಣಿಕಾ ಟ್ರಕ್ ಡಿಕ್ಕಿಯಾಗಿದೆ. ಪರಿಣಾಮ ಬಸ್ ನಲ್ಲಿದ್ದವರ ಪೈಕಿ 18 ಮಂದಿ ಸಾವನಮ್ನಪ್ಪಿದ್ದ ಹಲವರು ಗಾಯಗೊಂಡಿದ್ದಾರೆ.
ಜಲ್ಲಿಕಲ್ಲು ಸಾಗಿಸುತ್ತಿದ್ದ ಬೃಹತ್ ಟ್ರಕ್ ಬಸ್ ಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಟ್ರಕ್ ಗುದ್ದಿದ ರಭಸದಿಂದಾಗಿ ಟ್ರಕ್ ನಲ್ಲಿದ್ದ ಜಲ್ಲಿಕಲ್ಲುಗಳು ಬಸ್ ನೊಳಗೆ ಬಿದ್ದಿವೆ. ಜಲ್ಲಿಕಲ್ಲುಗಳಲ್ಲಿ ಕೆಲವು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.
ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಚೆವೆಲ್ಲಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಘಾತದ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























