ಇರಾನ್ ಹೊಸ ನಾಯಕನಿಗೆ ನೆಮ್ಮದಿ ಇರುವುದಿಲ್ಲ: ಡೊನಾಲ್ಡ್ ಟ್ರಂಪ್ | 1 ಲೀಟರ್ ತೈಲ ನಿಮಗೆ ಸಿಗಲ್ಲ: ಇರಾನ್ ಎಚ್ಚರಿಕೆ - Mahanayaka

ಇರಾನ್ ಹೊಸ ನಾಯಕನಿಗೆ ನೆಮ್ಮದಿ ಇರುವುದಿಲ್ಲ: ಡೊನಾಲ್ಡ್ ಟ್ರಂಪ್ | 1 ಲೀಟರ್ ತೈಲ ನಿಮಗೆ ಸಿಗಲ್ಲ: ಇರಾನ್ ಎಚ್ಚರಿಕೆ

trump khamenei
10/03/2026

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ಸಂಘರ್ಷದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇರಾನ್‌ ನ ನೂತನ ಸುಪ್ರೀಂ ಲೀಡರ್ ಆಗಿ ಆಯ್ಕೆಯಾಗಿರುವ ಮುಜ್ತಬಾ ಖಮೇನಿ ಅವರು ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

ಇರಾನ್ ಮೇಲಿನ ದಾಳಿಗಳು ಅತ್ಯಂತ ಯಶಸ್ವಿಯಾಗಿದ್ದು, ಯುದ್ಧವು ಶೀಘ್ರದಲ್ಲೇ ಕೊನೆಗೊಳ್ಳಬಹುದು ಎಂದು ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇರಾನ್‌ನ ತಿರುಗೇಟು:

ಟ್ರಂಪ್ ಹೇಳಿಕೆಗೆ ಇರಾನ್ ತೀವ್ರವಾಗಿ ಪ್ರತಿಕ್ರಿಯಿಸಿದೆ. “ಯುದ್ಧ ಯಾವಾಗ ಕೊನೆಗೊಳ್ಳಬೇಕು ಎಂಬುದನ್ನು ವಾಷಿಂಗ್ಟನ್ ಅಲ್ಲ, ನಾವು ನಿರ್ಧರಿಸುತ್ತೇವೆ” ಎಂದು ಇರಾನ್ ವಿದೇಶಾಂಗ ಸಚಿವರು ಗುಡುಗಿದ್ದಾರೆ. ಅಷ್ಟೇ ಅಲ್ಲದೆ, ಅಮೆರಿಕಾ ಮತ್ತು ಇಸ್ರೇಲ್ ದಾಳಿ ಮುಂದುವರಿಸಿದರೆ, ಜಗತ್ತಿನ ಪ್ರಮುಖ ತೈಲ ಮಾರ್ಗವಾದ ‘ಸ್ಟ್ರೈಟ್ ಆಫ್ ಹಾರ್ಮುಜ್’ ಮೂಲಕ ಒಂದು ಲೀಟರ್ ತೈಲವೂ ಹೊರಹೋಗದಂತೆ ತಡೆಯುವುದಾಗಿ ಇರಾನ್ ಎಚ್ಚರಿಸಿದೆ. ಇದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಗಡಿ ದಾಟಿದೆ.

ಭಾರತದ ಅಡುಗೆಮನೆಗೆ ತಟ್ಟಿದ ಯುದ್ಧದ ಬಿಸಿ:

ಪಶ್ಚಿಮ ಏಷ್ಯಾದ ಈ ಸಂಘರ್ಷ ಈಗ ಭಾರತದ ಮೇಲೂ ನೇರ ಪರಿಣಾಮ ಬೀರಿದೆ. ತೈಲ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ದೆಹಲಿ, ಮುಂಬೈ ಮತ್ತು ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ (LPG) ಸಿಲಿಂಡರ್‌ ಗಳ ತೀವ್ರ ಕೊರತೆ ಉಂಟಾಗಿದೆ. ಬೆಂಗಳೂರಿನ ಹೋಟೆಲ್ ಮಾಲೀಕರ ಸಂಘವು ಸಿಲಿಂಡರ್ ಪೂರೈಕೆ ಇಲ್ಲದಿದ್ದರೆ ಹೋಟೆಲ್‌ ಗಳನ್ನು ಮುಚ್ಚಬೇಕಾದ ಪರಿಸ್ಥಿತಿ ಬರಬಹುದು ಎಂದು ಆತಂಕ ವ್ಯಕ್ತಪಡಿಸಿದೆ. ಆದರೆ, ಭಾರತ ಸರ್ಕಾರವು ಎಲ್‌ ಪಿಜಿ ಉತ್ಪಾದನೆಯನ್ನು 10% ಹೆಚ್ಚಿಸಲಾಗಿದ್ದು, ಯಾವುದೇ ಆತಂಕ ಬೇಡ ಎಂದು ಭರವಸೆ ನೀಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ