ಬೆಂಗಳೂರು ಮೂಲದ ಪ್ರವಾಸಿಗರ ಟಿಟಿ ವಾಹನ ಪಲ್ಟಿ: ನಾಲ್ವರಿಗೆ ಗಂಭೀರ ಗಾಯ
ಚಿಕ್ಕಮಗಳೂರು/ಮೂಡಿಗೆರೆ: ಬೆಂಗಳೂರಿನ ಪ್ರವಾಸಿಗರ ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ನಾಲ್ವರು ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ದರ್ಶನ ಪಡೆಯಲು ತೆರಳುತ್ತಿದ್ದ ಪ್ರವಾಸಿಗರ ಟಿಟಿ ವಾಹನ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.
ಘಟನೆ ಸಂಬಂಧ ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: