ತುಳುನಾಡಿನ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ ಸಚಿವ ಸುರೇಶ್ ಕುಮಾರ್ - Mahanayaka

ತುಳುನಾಡಿನ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ ಸಚಿವ ಸುರೇಶ್ ಕುಮಾರ್

05/01/2021

ಬೆಂಗಳೂರು: ತುಳುನಾಡಿನ ಶಿಕ್ಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿ ಸುದ್ದಿ ನೀಡಿದ್ದು, ತಮ್ಮ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.


Provided by

ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಶಿಕ್ಷಣ ನೀತಿಯಿಂದಾಗಿ ಪ್ರಾದೇಶಿಕ ಭಾಷೆಗಳೀಗೆ ವಿಶೇಷ ಆದ್ಯತೆ ಸಿಗಲಿದೆ. ಈ ನಿಟ್ಟಿನಲ್ಲಿ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೆ ಸರ್ಕಾರ ನ್ಯಾಯ ಒದಗಿಸಲಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಕೇವಲ 15 ದಿನಗಳಲ್ಲಿ  ಹೊಸ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ. ಆ ನಂತರ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.


Provided by

ಇತ್ತೀಚಿನ ಸುದ್ದಿ