ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ಅರೆಸ್ಟ್! - Mahanayaka

ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ಅರೆಸ್ಟ್!

arpith
04/02/2023

ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಕಾರು ಚಾಲಕನಾಗಿದ್ದ ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ.

ಬಂಧಿತನನ್ನು ಅರ್ಪಿತ್ ಎಂದು ಗುರುತಿಸಲಾಗಿದೆ. ಮೂಲ್ಕಿ ಸಮೀಪದ ಪಡುಪಣಂಬೂರು ಬಳಿ ಲಾರಿಯೊಂದು ಟಯರ್ ಪಂಚರ್ ಆಗಿ ನಿಂತಿತ್ತು. ಇದು‌ ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ. ಈ ಲಾರಿಯಲ್ಲಿದ್ದ ಮಧ್ಯಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂ ಕೇರಳ ನಿವಾಸಿ ಅನೀಶ್(42) ಎಂಬುವವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್ ತೆಗೆದು ದುರಸ್ತಿ ಮಾಡುತ್ತಿದ್ದರು. ಈ ವೇಳೆ ಇದೇ ಹೆದ್ದಾರಿಯಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಚಲಿಸುತ್ತಿದ್ದ ಕಾರು, ಲಾರಿಯ ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು.

ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ತನಿಖೆ ನಡೆಸಿ ಆರೋಪಿತನನ್ನು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ