ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ 9 ಮಂದಿಯ ದಾರುಣ ಸಾವು - Mahanayaka
7:30 AM Thursday 13 - November 2025

ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ 9 ಮಂದಿಯ ದಾರುಣ ಸಾವು

tumakuru
25/08/2022

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂ ಬೆಳ್ಳ ಬಳಿಯಲ್ಲಿ  ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಮಕ್ಕಳ ಸಹಿತ 9 ಜನರು ದಾರುಣವಾಗಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ.

ಮೃತಪಟ್ಟವರು ಮಾನ್ವಿಗೆ ಸೇರಿದವರು ಎನ್ನಲಾಗಿದ್ದು,ಮೃತರ ಪೈಕಿ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ವಡವಟ್ಟಿ ಗ್ರಾಮದ ವಾಹನ ಚಾಲಕ ಕೃಷ್ಣಪ್ಪ(35) ಹಾಗೂ ಇದೇ ಗ್ರಾಮದ ಲಕ್ಷ್ಮೀ ಎಂಬ ಇಬ್ಬರ ಗುರುತು ಪತ್ತೆಯಾಗಿದ್ದು, ಉಳಿದ 7 ಮಂದಿಯ ಗುರುಪತ್ತೆ ಕಾರ್ಯ ಮುಂದುವರಿದಿದೆ.

ಘಟನೆಯಲ್ಲಿ ದುರ್ಗಮ್ಮ, ಬಾಲಾಜಿ, ಸಂದೀಪ್, ಉಮೇಶ್, ಯಲ್ಲಮ್ಮ, ಅನಿಲ್ ದೇವರಾಜು, ಮೋನಿಕಾ, ನಾಗಪ್ಪ, ವಸಂತ, ವೈಶಾಲಿ, ವಿರೂಪಾಕ್ಷ, ಲತಾ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಸ್ಪಷ್ಟ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ಘಟನೆ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ,  ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ