ಯುವತಿ ಕೆಲಸಕ್ಕೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿ: ಕೆಲವೇ ಕ್ಷಣದಲ್ಲಿ ನಡೆದು ಹೋಯ್ತು ಬರ್ಬರ ಹತ್ಯೆ!
ತುಮಕೂರು: ಯುವತಿಯೋರ್ವಳ ಮನೆಗೆ ನುಗ್ಗಿದ ದುಷ್ಕರ್ಮಿಯೋರ್ವ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ನಗರದ ವಿದ್ಯಾನಗರದಲ್ಲಿ ನಡೆದಿದ್ದು, ದುಷ್ಕರ್ಮಿಯ ಕೃತ್ಯಕ್ಕೆ ನಗರ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.
ವೀಣಾ (23) ಕೊಲೆಯಾದ ದುರ್ದೈವಿಯಾಗಿದ್ದಾರೆ. ಈಕೆ ತುಮಕೂರಿನ ಇಂಡಸ್ಟ್ರಿಯಲ್ ಏರಿಯಾದಲ್ಲಿ ಇರುವಂತಹ ಇನ್ ಕ್ಯಾಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು.
ತುರುವೇಕೆರೆ ತಾಲೂಕಿನ ಹುಲೆಕೆರೆ ಗ್ರಾಮದ ನಿವಾಸಿಯಾಗಿರುವ ವೀಣಾ, ತುಮಕೂರಿನ ವಿದ್ಯಾನಗರದಲ್ಲಿ ಸ್ನೇಹಿತೆಯರೊಂದಿಗೆ ವಾಸವಿದ್ದಳು. ಇಂದು ಕಚೇರಿಗೆ ಹೋಗುವುದಕ್ಕೂ ಮೊದಲು ವೀಣಾ ವಾಸವಿದ್ದ ಮನೆಗೆ ನುಗ್ಗಿದ ದುಷ್ಕರ್ಮಿ ಕತ್ತು ಕೊಯ್ದು ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯ ಪ್ರಿಯಕರನಿಂದಲೇ ಹತ್ಯೆ ನಡೆದಿದೆ ಅನ್ನೋ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw