ಕುರಿಗಳಂತೆ ಮಕ್ಕಳ ಸಾಗಾಟ: ಟಾಟಾಏಸ್ ವಾಹನ ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ - Mahanayaka

ಕುರಿಗಳಂತೆ ಮಕ್ಕಳ ಸಾಗಾಟ: ಟಾಟಾಏಸ್ ವಾಹನ ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

tumakuru
04/01/2025


Provided by

ತುಮಕೂರು: ಟಾಟಾಏಸ್ ವಾಹನ ಪಲ್ಟಿಯಾದ ಪರಿಣಾಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ದೊಡ್ಡಸಾಗ್ಗೆರೆ ಮತ್ತು ಮಾವತ್ತೂರು ಮುಖ್ಯರಸ್ತೆಯ ಗೌಡನಕುಂಟೆ ಬಳಿ ನಡೆದಿದೆ.

ಮಿನಿ ಲಾಲ್‌ ಬಾಗ್‌ ಗೆ ವನಬೇಟಿ ಕಾರ್ಯಕ್ರಮಕ್ಕೆ ಸರ್ಕಾರಿ ಶಾಲೆ 35 ಮಕ್ಕಳನ್ನು  ಕುರಿಗಳಂತೆ ಟಾಟಾ ಎಸ್ ವಾಹನದಲ್ಲಿ ತುಂಬಿಕೊಂಡು ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ 15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಚಿಂಪುಗಾನಹಳ್ಳಿ ಸರಕಾರಿ ಪ್ರಾಥಮಿಕ ಪಾಠಶಾಲೆಯಿಂದ ದೊಡ್ಡಸಾಗ್ಗೆರೆ ಬಳಿಯ ಮಿನಿ ಲಾಲ್‌ ಬಾಗ್ ವೀಕ್ಷಣೆಗೆ  ಶಾಲಾ ಆಡಳಿತ ಮಕ್ಕಳನ್ನು ಟಾಟಾ ಏಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದಾರೆ.  ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಈ ಘಟನೆಯಲ್ಲಿ ಶಿಕ್ಷಣ ಇಲಾಖೆ ಬಿಇಓ ಮತ್ತು ಚಿಂಪುಗಾನಹಳ್ಳಿ ಶಾಲೆಯ ಮುಖ್ಯಶಿಕ್ಷಕರ ದಿವ್ಯ ನಿರ್ಲಕ್ಷ ಕಂಡು ಬಂದಿದೆ.  ಭದ್ರತೆಯೇ ಇಲ್ಲದ ಟಾಟಾ ಎಸಿ ವಾಹನದಲ್ಲಿ ಸರಕಾರಿ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗಲು ಬಿಇಓ ಅನುಮತಿ ನೀಡಿದ್ದಾದರೂ ಏಕೆ ಎಂಬುದೇ ಪ್ರಶ್ನೆ ಕೇಳಿ ಬಂದಿದೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ