ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ವಿವಿಧ ಹುದ್ದೆಗಳ ಭರ್ತಿ: ಅರ್ಜಿ ಹೇಗೆ ಸಲ್ಲಿಸಬೇಕು? - Mahanayaka
6:48 PM Wednesday 20 - August 2025

ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ವಿವಿಧ ಹುದ್ದೆಗಳ ಭರ್ತಿ: ಅರ್ಜಿ ಹೇಗೆ ಸಲ್ಲಿಸಬೇಕು?

tumakuru
24/12/2024


Provided by

Tumkur DHFWS Recruitment 2024 — ತುಮಕೂರು ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ (PM–ABHIM) ಯೋಜನೆಯ ಅಡಿಯಲ್ಲಿ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಈ ಹುದ್ದೆಗಳಿಗೆ ಅರ್ಜಿ ಹೇಗೆ ಸಲ್ಲಿಸಬೇಕು? ಯಾವ ಯಾವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ? ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿ ಸೇರಿದಂತೆ ನೇಮಕಾತಿಯ ಸಂಪೂರ್ಣ ವಿವರವೂ ಈ ಲೇಖನದಲ್ಲಿ ತಿಳಿಸಲಾಗಿದೆ.

ವಿವಿಧ 60 ಹುದ್ದೆಗಳ ನೇಮಕಾತಿ :

ಹೌದು, ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯ ಅಡಿ ಒಟ್ಟು 60 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಹುದ್ದೆಗಳ ವಿವರವು ಈ ಕೆಳಗಿನಂತಿದೆ :

* ಎಂ.ಬಿ.ಬಿ.ಎಸ್. ವೈದ್ಯಾಧಿಕಾರಿಗಳು           — 12 ಹುದ್ದೆಗಳು

* ಪ್ರಯೋಗಶಾಲಾ ತಂತ್ರಜ್ಞರು          — 11 ಹುದ್ದೆಗಳು

* ಕಿರಿಯ ಆರೋಗ್ಯ ಸಹಾಯಕರು    25 — ಹುದ್ದೆಗಳು

* ಶುಶ್ರೂಷಾಧಿಕಾರಿಗಳು         — 12 ಹುದ್ದೆಗಳು

ಅರ್ಹತೆಗಳು:  

ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ, ಅಲ್ಲಿ ಸಿಗುವಂತಹ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಿದ ಸಂಪೂರ್ಣ ಅರ್ಹತೆಗಳ ಬಗ್ಗೆ ತಿಳಿದುಕೊಂಡು ನೀವು ಅರ್ಹತೆ ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಿ.

Official Notification Download link — https://nhm.karnataka.gov.in/

ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಸುವುದು ಹೇಗೆ?

ಈ ನೇಮಕಾತಿಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೆರಿಟ್ ಕಂ ರೋಸ್ಟರ್ ಅನ್ವಯ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ದಿನಾಂಕ: 26-12-2024 ರಂದು ನಡೆಯುವ ನೇರ ಸಂದರ್ಶನಕ್ಕೆ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ವಿಳಾಸ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ, ಅಮಾನಿಕೆರೆ ಮುಂಭಾಗ, ತುಮಕೂರು ಜಿಲ್ಲೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ