ಬೆಳ್ಳಾರೆ ಉದ್ವಿಗ್ನ ಪರಿಸ್ಥಿತಿ: ತುರ್ತು ಸಭೆ ಕರೆದ ಸಿಎಂ ಬೊಮ್ಮಾಯಿ - Mahanayaka

ಬೆಳ್ಳಾರೆ ಉದ್ವಿಗ್ನ ಪರಿಸ್ಥಿತಿ: ತುರ್ತು ಸಭೆ ಕರೆದ ಸಿಎಂ ಬೊಮ್ಮಾಯಿ

basavaraj bommai
27/07/2022


Provided by

ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆಯಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪ್ರತಿಭಟನೆಯ ವೇಳೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಾರಣ, ಲಾಠಿಚಾರ್ಜ್ ಕೂಡ ಮಾಡಲಾಗಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ.

ಬೆಳ್ಳಾರೆ ಬೂದಿ ಮುಚ್ಚಿದ ಕೆಂಡವಾಗಿದ್ದು,  ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ.  ಈ ನಡುವೆ ಬಿಜೆಪಿ ಮುಖಂಡರನ್ನು ಕಂಡರೆ ಕಾರ್ಯಕರ್ತರು ಉರಿದು ಬೀಳುತ್ತಿದ್ದು, ಪ್ರವೀಣ್ ಸಾವಿಗೆ ನ್ಯಾಯ ಸಿಗುವವರೆಗೂ ಸಂಘಟನೆ ಕೆಲಸ ಮಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆ ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಹತ್ವದ ಸಭೆಯನ್ನು ಕರೆದಿದ್ದು, ಈ ಸಭೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಪೊಲೀಸ್ ಇಲಾಖೆಯ ವರಿಷ್ಠರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ