ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ಬಿಜೆಪಿ ಕಾರ್ಯಕರ್ತ ಅರೆಸ್ಟ್ - Mahanayaka

ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ಬಿಜೆಪಿ ಕಾರ್ಯಕರ್ತ ಅರೆಸ್ಟ್

udupi
27/08/2024

ಉಡುಪಿ: ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ್ದ ಕೇಸ್ ಗೆ ಸಂಬಂಧಿಸಿದಂತೆ ಕಾರ್ಕಳ ಠಾಣಾ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತ ಅಭಯ್ ಎಂದು ಗುರುತಿಸಲಾಗಿದೆ. ಈ ಪ್ರಕರಣವನ್ನು ಲವ್ ಜಿಹಾದ್ ಎಂದು ಹಿಂದೂ ಸಂಘಟನೆಗಳು ಬಿಂಬಿಸಿ ಪ್ರತಿಭಟಿಸಿದ್ದವು. ಇದೀಗ ಬಿಜೆಪಿ, ಹಿಂದೂ ಕಾರ್ಯಕರ್ತ ಅಭಯ್ ಈ ಕೇಸ್ ನಲ್ಲಿ ಭಾಗಿಯಾಗಿರುವುದು ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರಿಗೆ ಮುಜುಗರ ಸೃಷ್ಟಿಸಿದೆ.

ಅಭಯ್ ಅತ್ಯಾಚಾರ ಆರೋಪ ಹೊಂದಿರುವ ಅಲ್ತಾಫ್ಗೆ ಡ್ರಗ್ಸ್ ತಂದು ಕೊಟ್ಟಿದ್ದ ಎಂದು ತಿಳಿದುಬಂದಿದೆ. ಈತ ಕಾಪುವಿನ ವ್ಯಕ್ತಿಯೊಂದಿಗೆ ಸೇರಿಕೊಂಡು ಟಿಪ್ಪರ್ ಖರೀದಿಸಿದ್ದ. ಆದರೆ ಲೋನ್ ಪೆಂಡಿಂಗ್ ಕಾರಣದಿಂದ ಫೈನಾನ್ಸ್ ಕಂಪೆನಿ ವಾಹನ ಮುಟ್ಟುಗೋಲು ಹಾಕಿಕೊಂಡಿತ್ತು. ನಂತರ ಈತ ಬೆಂಗಳೂರಿನ ಸ್ಪಾವೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಅತ್ಯಾಚಾರ ಆರೋಪಿ ಅಲ್ತಾಫ್ ಹಾಗೂ ಅಭಯ್ ಇಬ್ಬರು ಕಾರ್ಕಳದ ಜೋಡು ರಸ್ತೆ ಬಳಿ ಟಿಪ್ಪರ್ ನಿಲ್ಲಿಸುತ್ತಿದ್ದರು. ಈ ಸಂದರ್ಭದಲ್ಲಿ ಇವರಿಬ್ಬರಿಗೆ ಪರಿಚಯವಾಗಿತ್ತಂತೆ. ಬಳಿಕ ಇವರಿಬ್ಬರು ಸ್ನೇಹಿತರಾಗಿದ್ದರು.

ಬಂಧಿತ ಆರೋಪಿ ಅಭಯ್ ಫೇಸ್ ಬುಕ್ನಲ್ಲಿ MLA ಸುನೀಲ್ಕುಮಾರ್ ಫೋಟೋ ಹಾಕಿಕೊಂಡಿದ್ದಾನೆ. ಅಷ್ಟೇ ಅಲ್ಲದೆ ಬಿಜೆಪಿ, ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದಾನೆ.

ಡ್ರಗ್ಸ್ ವಿರೋಧಿ ಅಭಿಯಾನದಲ್ಲಿ ಭಾಗಿಯಾಗಿದ್ದ!

ಕಳೆದ ತಿಂಗಳಷ್ಟೇ ಡ್ರಗ್ಸ್ ವಿರೋಧಿ ಅಭಿಯಾನದಲ್ಲಿ ಅಭಯ್ ಭಾಗಿಯಾಗಿದ್ದ. ಕಾರ್ಕಳ DySPಗೆ ಮನವಿ ನೀಡುವ ಸಮಯದಲ್ಲಿಯೂ ಜೊತೆಗಿದ್ದ ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಭಯ್ ಫೋಟೋ ವೈರಲ್ ಆಗುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ