ಹಾಸನ ವಿಡಿಯೋ ಕೇಸ್ ಗೆ ಟ್ವಿಸ್ಟ್: ಅಪ್ರಾಪ್ತ ಹೆಣ್ಣು ಮಕ್ಕಳನ್ನೂ ಬಳಸಿಕೊಂಡ ಶಂಕೆ!

ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ಎಸ್ ಐಟಿ ತನಿಖೆಗೆ ತಂಡ ರಚನೆಯಾಗಿದೆ. ಈ ಪ್ರಕರಣ ಸಂಬಂಧ ಮಹಿಳಾ ಆಯೋಗ ಮತ್ತು ಮಕ್ಕಳ ಆಯೋಗ ಎಸ್ ಐಟಿಗೆ ಪತ್ರ ಬರೆದಿದ್ದು, ಕೆಲವು ಸೂಚನೆ ನೀಡಿದೆ. ಜೊತೆಗೆ ವಿಡಿಯೋ ಹರಿದಾಡುತ್ತಿರುವುದನ್ನು ನಿಲ್ಲಿಸಲು ಮನವಿ ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪ್ರಾಸಿಕ್ಯೂಟರ್ ಆಗಿ ರಾಜ್ಯ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವಿಚಾರಣಾ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಲಯಗಳಲ್ಲಿನ ವಿಚಾರಣೆಗೆ ರಾಜ್ಯ ಸರ್ಕಾರದ ಪರವಾಗಿ ಜಗದೀಶ್ ಅವರು ಹಾಜರಾಗಲಿದ್ದಾರೆ.
ಸಂತ್ರಸ್ತೆಯೊಬ್ಬರು, ತನ್ನ ಮಗಳ ಜೊತೆಗೆ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದು, ಹೀಗಾಗಿ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಇಂತಹ ಪ್ರಕರಣ ಪತ್ತೆಯಾದರೆ ಈ ಬಗ್ಗೆ ವರದಿ ನೀಡುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಎಸ್ ಐಟಿಗೆ ಪತ್ರ ಬರೆದಿದೆ ಎಂದು ವರದಿಯಾಗಿದೆ.
ಸದ್ಯ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎಸ್ ಐಟಿಗೆ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವುದು ಮಾತ್ರವಲ್ಲದೇ ನೊಂದ ಮಹಿಳೆಯರು ಮತ್ತು ಮಕ್ಕಳ ಹಿತ ರಕ್ಷಣೆ ಮಾಡುವ ಹೊಣೆಗಾರಿಕೆ ಕೂಡ ಹೆಗಲಿಗೆ ಬಿದ್ದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth