ಜಿಂಕೆಯನ್ನು ಬೇಟೆಯಾಡಿ ಮಾಂಸ ಕತ್ತರಿಸುತ್ತಿದ್ದ ವೇಳೆ ದಾಳಿ: ಇಬ್ಬರ  ಬಂಧನ, ಮೂವರು ಪರಾರಿ - Mahanayaka

ಜಿಂಕೆಯನ್ನು ಬೇಟೆಯಾಡಿ ಮಾಂಸ ಕತ್ತರಿಸುತ್ತಿದ್ದ ವೇಳೆ ದಾಳಿ: ಇಬ್ಬರ  ಬಂಧನ, ಮೂವರು ಪರಾರಿ

kollegala
03/06/2023

ಚಾಮರಾಜನಗರ: ಜಿಂಕೆ ಯನ್ನು ಕೊಂದು ಮಾಂಸ ಕತ್ತರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ದಾಳಿ ವೇಳೆ ಮೂವರು ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವನ್ಯ ಜೀವಿ ಅರಣ್ಯ ವಲಯದಲ್ಲಿ ನಡೆದಿದೆ.

ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ಮೂರ್ತಿ ಮತ್ತು ರಾಮು ಬಂಧಿತ ಆರೋಪಿಗಳಾಗಿದ್ದಾರೆ.  ಐವರು ಬೇಟೆಗಾರರು ಕೊಳ್ಳೇಗಾಲದ ರಾಯರಹಳ್ಳ ಅರಣ್ಯ ಪ್ರದೇಶದಲ್ಲಿ ನಾಡ ಬಂದೂಕು ಬಳಸಿ ಜಿಂಕೆ ಬೇಟೆಯಾಡಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಇಬ್ಬರು ಆರೋಪಿಗಳನ್ನು

ಬಂಧಿತರಿಂದ ಅರಣ್ಯಾಧಿಕಾರಿಗಳು ನಾಲ್ಕು ಚಾಕು, ಎರಡು ಮೊಬೈಲ್,ಮೂರು ಬೈಕ್ ಹಾಗೂ 35 ಕೆ.ಜಿ. ಜಿಂಕೆ ಮಾಂಸ ವಶವನ್ನು ವಶಪಡಿಸಿಕೊಂಡಿದ್ದಾರೆ. ಪರಾರಿಯಾದ ಮೂರು ಜನರ  ಬಂಧನಕ್ಕೂ ಅಧಿಕಾರಿಗಳು ಬಲೆ ಬೀಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ