ನಟಿ ರಮ್ಯಾಗೆ ಅಶ್ಲೀಲ ಮೆಸೇಜ್: ಇಬ್ಬರ ಬಂಧನ

ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತ ಕ್ರಮ ಕೈಗೊಂಡಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ನಟ ದರ್ಶನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ ಬಗ್ಗೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಇದೆ ಎಂದು ಬರೆದುಕೊಂಡಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿತ್ತು.
ದರ್ಶನ್ ಫ್ಯಾನ್ಸ್ ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್ ಗಳ ಕಮೆಂಟ್ ಬಾಕ್ಸ್ ನಲ್ಲಿ ಅಶ್ಲೀಲ ಕಮೆಂಟ್ ಗಳನ್ನು ಮಾಡಿದ್ದರು. ಇಷ್ಟಕ್ಕೆ ನಿಲ್ಲಿಸದೆ ರಮ್ಯಾಗೆ ಕೆಟ್ಟ ಕೆಟ್ಟ ಮೆಸೇಜ್ ಗಳನ್ನು ಕಳುಹಿಸಿದ್ದರು. ಇದಕ್ಕೆ ತಕ್ಕ ಬುದ್ದಿ ಕಲಿಸಲು ರಮ್ಯಾ ಅವರು ಹೋಗಿ ಸೈಬರ್ ಠಾಣೆಗೆ ದೂರು ದಾಖಲು ಮಾಡಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಒಬ್ಬ ಹಾಗೂ ಚಿತ್ರದುರ್ಗ ಮೂಲದ ಮತ್ತೊಬ್ಬನ ಬಂಧನ ಆಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD