ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಕಾಯ್ದೆಯಡಿ ಇಬ್ಬರ ಬಂಧನ - Mahanayaka
2:17 AM Saturday 13 - September 2025

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಕಾಯ್ದೆಯಡಿ ಇಬ್ಬರ ಬಂಧನ

arrest
16/11/2022

ಕುಂದಾಪುರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.


Provided by

ಶಿವಮೊಗ್ಗ ಮೂಲದ ಪ್ರವೀಣ್, ಅಜಯ್ ಬಂಧಿತ ಆರೋಪಿಗಳು. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಿ ಮನೆಯಲ್ಲಿ ವಾಸವಾಗಿದ್ದ 8ನೇ ತರಗತಿಯ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಮನೆಯ ಹತ್ತಿರದ ಕಾಡಿಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಅಪ್ರಾಪ್ತೆ ಮೈ ಕೈ ಮುಟ್ಟಿ ಆರೋಪಿಗಳು ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಬಾಲಕಿ ಪ್ರತಿರೋಧ ಒಡ್ಡಿದರೂ, ಅವಳ ಮಾತನ್ನು ಕೇಳದೇ ಆರೋಪಿಗಳು ಆಕೆಯೊಂದಿಗೆ ಲೈಂಗಿಕವಾಗಿ ಅಸಭ್ಯ ವರ್ತನೆ ತೋರಿದ್ದಾರೆ ಎಂದು ದೂರಲಾಗಿದೆ.

ಶಂಕರನಾರಯಣ ಪೊಲೀಸ್ ಠಾಣಾ ಎಸ್ಸೈ ಶ್ರೀಧರ್ ನಾಯ್ಕ್ ಹಾಗೂ ಸಿಬ್ಬಂದಿ ತಂಡ ಆರೋಪಿಗಳನ್ನು ಬಂಧಿಸಿದೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ