ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸ್ನಾನ ಮಾಡಲು ನದಿಗೆ ಇಳಿದಿದ್ದ ಇಬ್ಬರು ಬಾಲಕರು ಸಾವು

ವಿಜಯಪುರ: ನದಿಗೆ ಸ್ನಾನ ಮಾಡಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ದಾರುಣ ಘಟನೆ ಜಿಲ್ಲೆಯ ಕೊಲ್ಲಾರ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.
ಕಾರಜೋಳ ಗ್ರಾಮದ ಸುದೀಪ (ಪಪ್ಪು) ದೊಡ್ಡಮನಿ (12), ಶ್ರೀಧರ ದೊಡ್ಡಮನಿ (10) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಹುಚ್ಚಮ್ಮ ದೇವಿ ಜಾತ್ರಾ ಮಹೋತ್ಸವ ಆಯೋಜಿಸಲಾಗಿತ್ತು. ಕಾರಜೋಳ ಗ್ರಾಮದಿಂದ ಕೃಷ್ಣಾ ನದಿಗೆ ದೇವಿಯ ಪಲ್ಲಕ್ಕಿ ಹೊತ್ತು, ದೇವಿಯ ಸ್ನಾನ ಮಾಡಿಸಿಕೊಂಡು ಬರಲು ಗ್ರಾಮಸ್ಥರು ತೆರಳಿದ್ದರು.
ಮೃತ ಬಾಲಕರು ತಮ್ಮ ತಂದೆ—ತಾಯಿಯ ಜೊತೆಗೆ ಸ್ನಾನ ಮಾಡಲು ನದಿಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸ್ಥಳೀಯರ ಸಹಾಯದಿಂದ ಇಬ್ಬರು ಬಾಲಕರ ಮೃತದೇಹವನ್ನು ನದಿಯಿಂದ ಮೇಲೆತ್ತಲಾಗಿದೆ. ಕೊಲ್ಲಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth