ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ನುಗ್ಗಿ ಎರಡು ಕಾರುಗಳ ಕಳವು!

car theft
13/07/2023

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ನುಗ್ಗಿದ ಕಳ್ಳರು ಎರಡು ಕಾರುಗಳನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಜಂಕ್ಷನ್ ಬಳಿ ನಡೆದಿದೆ.

ಈ ಮಳಿಗೆ ಸೂರಲ್ಪಾಡಿ ನಿವಾಸಿ ಅಬಿದ್ ಅಹಮ್ಮದ್ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಮಳಿಗೆಯ ಮುಂಭಾಗದ ಗಾಜಿನ ಬಾಗಿಲನ್ನು ಸುತ್ತಿಗೆಯಿಂದ ಹೊಡೆದು ಪುಡಿಗೈದು ಒಳ ಹೊಕ್ಕ ಕಳ್ಳರು ಕಚೇರಿಯ ಒಳಗೆ ಜಾಲಾಡಿದ್ದು, ಬಳಿಕ ಡ್ರಾವರ್ ಒಡೆದು ಅದರಲ್ಲಿ ಮಾರಾಟಕ್ಕೆ ಇಟ್ಟಿದ್ದ ಕಾರಿನ ಕಾಗದ ಪತ್ರದ ಜೊತೆಗೆ ಎರಡು ಕಾರುಗಳನ್ನು ಕಳ್ಳತನ‌ ಮಾಡಿದ್ದಾರೆ.

ಕಳ್ಳರು 6 ಲಕ್ಷ ರೂಪಾಯಿ ಮೌಲ್ಯದ ಕೆಂಪು ಬಣ್ಣದ ಸ್ವಿಫ್ಟ್ ಕಾರು, 9 ಲಕ್ಷ ರೂಪಾಯಿ ಮೌಲ್ಯದ ಕ್ರೇಟಾ ಕಾರು ಸೇರಿ ಒಟ್ಟು 15 ಲಕ್ಷ ರೂಪಾಯಿ ಮೌಲ್ಯದ ಎರಡು ಕಾರುಗಳನ್ನು ಕಳವು ಗೈದಿದ್ದಾರೆ.

ರೈನ್ ಕೋಟ್ ಮತ್ತು ಹೆಲ್ಮೆಟ್ ಧರಿಸಿದ್ದ ಕಳ್ಳರ ಕೈಚಳಕ ಕಚೆರಿಯ ಸಿಸಿ ಟಿವಿಯಲ್ಲಿ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಮಾಲಕ ಅಬಿದ್ ಅವರು ನೀಡಿದ ದೂರಿನಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version