ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ರೈತರು ಬಲಿ

chamarajanagara
25/10/2024

ಚಾಮರಾಜನಗರ: ಬೈಕ್ ನಲ್ಲಿ ತೆರಳುತ್ತಿದ್ದ ರೈತರಿಗೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಾಮರಾಜನಗರದ  ಅಯ್ಯನಪುರದಲ್ಲಿ ಈ ಘಟನೆ ನಡೆದಿದೆ. ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ನಾಗೇಂದ್ರ ಹಾಗೂ ಮಲ್ಲೇಶ್ ಮೃತ ದುರ್ದೈವಿಗಳು.ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ, ನಿರ್ಲಕ್ಷ್ಯದ ಆರೋಪದಲ್ಲಿ ಎಂಜಿಯರ್ ಮರಿಸ್ವಾಮಿ ಹಾಗೂ ಲೈನ್‌ಮ್ಯಾನ್ ಆನಂದ್ ಎಂಬವರನ್ನು ಸಸ್ಪೆಂಡ್ ಮಾಡಲಾಗಿದೆ.

ಬುಧವಾರ ರಾತ್ರಿ ಊಟ ಮಾಡಿ ಬೈಕ್ ನಲ್ಲಿ ರೈತರು ಜಮೀನಿಗೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿರುವ ವೇಳೆ ರಸ್ತೆ ಮಧ್ಯೆ ಜೋತು ಬಿದ್ದಿದ್ದ ಹೈಟೆನ್ಷನ್ ವೈರ್ ಗೆ ಕುತ್ತಿಗೆ ಸಿಲುಕಿಕೊಂಡಿದ್ದು, ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬುಧವಾರ ರಾತ್ರಿ ಈ ಘಟನೆ ನಡೆದಿತ್ತು. ಆದರೆ ಯಾರ ಗಮನಕ್ಕೂ ಬಂದಿರಲಿಲ್ಲ. ಬೆಳಗ್ಗೆ ಹೊಲಗದ್ದೆಗೆ ಹೋಗುವವರು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version