ಕೋಲಾರದಲ್ಲಿ ಇಬ್ಬರ ಜಗಳ ಮೂರನೇಯವರಿಗೆ ಟಿಕೆಟ್! - Mahanayaka

ಕೋಲಾರದಲ್ಲಿ ಇಬ್ಬರ ಜಗಳ ಮೂರನೇಯವರಿಗೆ ಟಿಕೆಟ್!

kv gowtham
30/03/2024


Provided by

ಕೋಲಾರ:   ಕೋಲಾರ ಲೋಕಸಭಾ ಕ್ಷೇತ್ರದಲ್ಲಿ  ಕೆ.ಹೆಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ನಡುವೆ ಟಿಕೆಟ್ ಗಾಗಿ ಭಾರೀ ಪೈಪೋಟಿ ಸೃಷ್ಟಿಯಾಗಿತ್ತು.  ಆದ್ರೆ ಇದೀಗ ಇಬ್ಬರ ಜಗಳ ಮೂರನೇಯವರಿಗೆ ಲಾಭ ಅನ್ನೋ ಹಾಗೆ ಎರಡೂ ಬಣವನ್ನು ಬಿಟ್ಟು ಕಾಂಗ್ರೆಸ್ ಹೈಕಮಾಂಡ್  ಮಾಜಿ ಮೇಯರ್ ವಿಜಯ್ ಕುಮಾರ್ ಅವರ ಪುತ್ರ ಕೆ.ವಿ.ಗೌತಮ್ ಅವರಿಗೆ ಟಿಕೆಟ್ ನೀಡಿದೆ.

ಕೋಲಾರದಲ್ಲಿ ರಮೇಶ್ ಕುಮಾರ್ ಹಾಗೂ ಮುನಿಯಪ್ಪ ಬಣಗಳ ನಡುವೆ ಟಿಕೆಟ್ ಗಾಗಿ ಬಂಡಾಯ ಸೃಷ್ಟಿಯಾಗಿತ್ತು. ಮುನಿಯಪ್ಪ ಬಣಕ್ಕೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಹೈಡ್ರಾಮ ನಡೆಸಲಾಗಿತ್ತು.

ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಧ್ಯಸ್ಥಿಕೆ ವಹಿಸಿ ಅಸಮಾಧಾನಿತರನ್ನು ಸಮಾಧಾನಪಡಿಸಿದ್ದರು. ಇದೀಗ ಎರಡೂ ಬಣಗಳನ್ನು ಹೊರತುಪಡಿಸಿ ಮೂರನೇಯವರಿಗೆ ಟಿಕೆಟ್ ನೀಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ