4:48 AM Wednesday 17 - December 2025

ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳು ಅರೆಸ್ಟ್!

mangalore crime news
22/10/2023

ವೀಸಾ ಅವಧಿ ಮುಗಿದ ನಂತರವೂ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಇಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ.

ಬಂಧಿತರು ನೈಜೀರಿಯಾದ ಅಂಕಿತೋಲಾ ಮತ್ತು ಘಾನಾದ ಸಲಾಮ್ ಕ್ರಿಶ್ಚಿಯನ್ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧನದ ನಂತರ ಇಬ್ಬರನ್ನು ಬೆಂಗಳೂರಿನಲ್ಲಿರುವ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ(FRRO) ಮುಂದೆ ಹಾಜರುಪಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಶೀಲನೆಯ ನಂತರ, FRRO ಬೆಂಗಳೂರಿನಲ್ಲಿರುವ ಬಂಧನ ಕೇಂದ್ರದಲ್ಲಿಡಲು ನಿರ್ದೇಶಿಸಿದೆ.

ಇತ್ತೀಚಿನ ಸುದ್ದಿ

Exit mobile version