ಛತ್ತೀಸ್ ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಇಬ್ಬರು ಐಟಿಬಿಪಿ ಜವಾನರು ಹುತಾತ್ಮ, ಇಬ್ಬರಿಗೆ ಗಾಯ
ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ ನಂತರ ಭಾರತೀಯ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಇಬ್ಬರು ಸಿಬ್ಬಂದಿ ಸಾವನ್ನಪ್ಪಿ, ಇಬ್ಬರು ಪೊಲೀಸರು ಗಾಯಗೊಂಡ ಘಟನೆ ನಡೆದಿದೆ.
ಭದ್ರತಾ ಸಿಬ್ಬಂದಿಯ ಜಂಟಿ ತಂಡಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಅಬುಜ್ಮಾದ್ ಪ್ರದೇಶದ ಕೊಡ್ಲಿಯಾರ್ ಗ್ರಾಮದ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಓರ್ಚಾ, ಇರಕ್ಭಟ್ಟಿ ಮತ್ತು ಮೊಹಾಂಡಿ ಪ್ರದೇಶಗಳಿಂದ ಪ್ರಾರಂಭಿಸಲಾದ ಕಾರ್ಯಾಚರಣೆಯಲ್ಲಿ ಐಟಿಬಿಪಿ, ಗಡಿ ಭದ್ರತಾ ಪಡೆ (ಬಿಎಸ್ಎಫ್) ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ ಆಫ್ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.
ಗಸ್ತು ತಂಡಗಳು ಕಾರ್ಯಾಚರಣೆಯ ನಂತರ ವಾಪಸ್ ಆಗುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಗಾಯಗೊಂಡ ನಾಲ್ವರು ಸಿಬ್ಬಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth