ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ಡಿವೈಡರ್ ಗೆ ಡಿಕ್ಕಿ ಹೊಡೆದ ಬಸ್: ಇಬ್ಬರು ಸಾವು, 8 ಮಂದಿಗೆ ಗಾಯ

ವಿಜಯನಗರ: ಲಾರಿಯನ್ನು ಓವರ್ ಟೇಕ್ ಮಾಡಲು ಹೋದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ 8 ಮಂದಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಿಸ್ಟಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಮನೋಜ್ (28) ಮತ್ತು ಸುರೇಶ್ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೂಡ್ಲಿಗಿ ಡಿವೈಎಸ್ ಪಿ ಮಲ್ಲೇಶ್ ದೊಡ್ಮನಿ, ಕೊಟ್ಟೂರು ಸಿಪಿಐ ದುರುಗಪ್ಪ, ಮತ್ತು ಜಿಲ್ಲಾ ಎಸ್ ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ನಿರ್ಲಕ್ಷ್ಯವನ್ನು ಉಲ್ಲೇಖಿಸಲಾಗಿದೆ.
ಘಟನೆಯ ವಿವರ:
ಬಸ್ ಮುದ್ದಲ್ ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. 40 ಪ್ರಯಾಣಿಕರು ಬಸ್ ನಲ್ಲಿದ್ದರು. NH 50ರ ಬಿಸ್ಟಹಳ್ಳಿ ಬಳಿಯಲ್ಲಿ ಎದುರಿನಲ್ಲಿ ಹೋಗುತ್ತಿದ್ದ ಲಾರಿಯನ್ನು ಬಸ್ ಚಾಲಕ ಓವರ್ ಟೇಕ್ ಮಾಡಲು ಯತ್ನಿಸಿದ್ದು, ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ ಡಿವೈಡರ್ ಗೆ ಅಪ್ಪಳಿಸಿದೆ. ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, 8 ಮಂದಿ ಗಾಯಗೊಂಡರು. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ ಅಂತ ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD