ಮುಂಜಾನೆ ಗುಂಡಿನ ಚಕಮಕಿ: ಭದ್ರತಾ ಪಡೆಗಳ ಎನ್‌ಕೌಂಟರ್‌; ಇಬ್ಬರು ಭಯೋತ್ಪಾದಕರು ಸಾವು

10/10/2023

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಮಂಗಳವಾರ ಮುಂಜಾನೆ ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಈ ಎನ್‌ಕೌಂಟರ್ ಆರಂಭವಾಗಿದೆ. ಇಬ್ಬರು ಭಯೋತ್ಪಾದಕರನ್ನು ಮೋರಿಫತ್ ಮಕ್ಬೂಲ್ ಮತ್ತು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ದವರು ಎಂದು ಗುರುತಿಸಲಾಗಿದೆ. ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಉಗ್ರರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೆಬ್ರವರಿಯಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅಚಾನ್ ಪ್ರದೇಶದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿ ಸಂಜಯ್ ಶರ್ಮಾ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು.
ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯ ನಂತರ ಪುಲ್ವಾಮಾದಲ್ಲಿ ಭಾರಿ ಕಟ್ಟೆಚ್ಚರಿಕೆಯನ್ನು ಮಾಡಲಾಗಿದೆ. ಈ ಕಾರಣಕ್ಕೆ ಭದ್ರತಾ ಪಡೆಗಳು ಪುಲ್ವಾಮಾದ ಕೆಲವು ಭಾಗದಲ್ಲಿ ಸೇನಾ ಉಪಕರಣಗಳನ್ನು ಅಳವಡಿಸಲಾಗಿದೆ. ಸೇನೆಯು ಬುಲೆಟ್ ಪ್ರೂಫ್ ವಾಹನಗಳು, ವಾಲ್-ಥ್ರೂ ರಾಡಾರ್‌ಗಳು ಮತ್ತು ಡ್ರೋನ್‌ಗಳನ್ನು ಬಳಸಲಾಗುತ್ತಿದೆ.

ಇತ್ತೀಚಿನ ಸುದ್ದಿ

Exit mobile version