ಪೊಲೀಸ್ ಠಾಣೆಯಲ್ಲಿ ಪೊಲೀಸರ ಮಧ್ಯೆ ಜಗಳ: ಅಶಿಸ್ತಿನ ವರ್ತನೆ ಬಗ್ಗೆ ತನಿಖೆಗೆ ಆದೇಶ

22/02/2024
ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಪೊಲೀಸ್ ಠಾಣೆಯೊಳಗೆ ಇಬ್ಬರು ಪೊಲೀಸರು ಪರಸ್ಪರ ವಾಗ್ವಾದ ನಡೆಸಿದ ಘಟನೆ ನಡೆದಿದೆ. ನೀಲಂಗಾ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಎಸ್.ಎಸ್.ಅಣ್ಣೆಬೋಯಿನ್ವಾಡ್ ಮತ್ತು ಕಾನ್ಸ್ ಟೇಬಲ್ ದಯಾನಂದ ಮಕ್ಕಾನಾ ಅವರ ಅಶಿಸ್ತಿನ ವರ್ತನೆಯ ಬಗ್ಗೆ ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಈ ಘರ್ಷಣೆಯಲ್ಲಿ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
“ನಿಲಂಗಾ ಪೊಲೀಸ್ ಠಾಣೆಯಲ್ಲಿ ಕೆಲವು ವೈಯಕ್ತಿಕ ಕಾರಣಗಳಿಗಾಗಿ ಇಬ್ಬರು ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು. ನಂತರ ಜಗಳ ನಡೆಯಿತು” ಎಂದು ಲಾತೂರ್ ಪೊಲೀಸ್ ವರಿಷ್ಠಾಧಿಕಾರಿ ಸೋಮಯ್ ಮುಂಡೆ ತಿಳಿಸಿದ್ದಾರೆ.
ತನಿಖೆಗೆ ಆದೇಶಿಸಲಾಗಿದ್ದು, ವರದಿಯ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಇತ್ತ ಪೊಲೀಸ್ ಅಧಿಕಾರಿ ಅನ್ನೆಬೋಯಿನ್ವಾಡ್ ತಮ್ಮ ಚಿಕಿತ್ಸೆಯ ಬಗ್ಗೆ ದಾಖಲೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.