ಭೀಕರ: ಬಸ್ ಬೈಕ್ ಅಪಘಾತ: ಇಬ್ಬರು ಸಾವು

ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಕೊಚ್ಚಿಯ ಪಲರಿವಟ್ಟಂ ಬಳಿ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 6.15 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ ಟಿಸಿ) ಬಸ್ ನ ಹಿಂದೆ ದ್ವಿಚಕ್ರ ವಾಹನ ಇದ್ದಾಗ, ಹಿಂದಿನಿಂದ ಬಂದ ಮತ್ತೊಂದು ಬಸ್, ಬೈಕ್ ಮತ್ತು ಅದರ ಮುಂದೆ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ.
ಇದೇ ವೇಳೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂದಿನಿಂದ ಬಂದ ಬಸ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದಿನಿಂದ ಬಂದ ಕೆಎಸ್ಆರ್ ಟಿಸಿ ಬಸ್ ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth