ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ: ಇಬ್ಬರು ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರು ಹೇಳಿದರು.
ಇಬ್ಬರು ಹೊರಗಿನ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಗಾಯಗೊಂಡ ಸಿವಿಲಿಯನ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಭಯೋತ್ಪಾದಕರ ಶೋಧಕ್ಕಾಗಿ ಪ್ರದೇಶವನ್ನು ಸುತ್ತುವರಿಯಲಾಗಿದೆ. ಹೆಚ್ಚಿನ ವಿವರಗಳನ್ನು ನೀಡಲಾಗುವುದು ಎಂದು ಕಾಶ್ಮೀರ ವಲಯ ಪೊಲೀಸರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
ಶೋಪಿಯಾನ್ ಜಿಲ್ಲೆಯ ಗಾಗ್ರೆನ್ ಪ್ರದೇಶದಲ್ಲಿ ಭಯೋತ್ಪಾದಕರು ಮೊನ್ನೆ ಸಹ ಮೂವರು ವಲಸೆ ಕಾರ್ಮಿಕರ ಮೇಲೆ ಗುಂಡು ಹಾರಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw