ಮತ್ತೆ ಇಬ್ಬರು ಬಿಜೆಪಿ ನಾಯಕರಿಗೆ ಪಕ್ಷದಿಂದ ಗೇಟ್ ಪಾಸ್

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಗೆ ಬಿಜೆಪಿ ಗೇಟ್ ಪಾಸ್ ನೀಡಿದೆ.
ಈ ಇಬ್ಬರು ಶಾಸಕರನ್ನೂ ಬಿಜೆಪಿಯು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದ್ದು, ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆ ಈ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆದರೆ ಈ ನೋಟಿಸ್ ಗೆ ಸರಿಯಾದ ಉತ್ತರ ನೀಡದ ಹಿನ್ನೆಲೆ ಉಚ್ಛಾಟನೆ ಮಾಡಲಾಗಿದೆ.
ಬಿಜೆಪಿ ಪಕ್ಷದಲ್ಲಿದ್ದುಕೊಂಡೇ ಈ ಇಬ್ಬರು ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ಸಭೆಗಳಲ್ಲಿ ಭಾಗಿಯಾಗುತ್ತಿದ್ದರು, ಅಲ್ಲದೇ ಬಿಜೆಪಿ ನಾಯಕರ ವಿರುದ್ಧವೇ ಹೇಳಿಕೆ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೂ ಬಿಜೆಪಿ ಪಕ್ಷದಿಂದ ಗೇಟ್ ಪಾಸ್ ನೀಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD