ಕುಖ್ಯಾತ ಇಬ್ಬರು ಮೊಬೈಲ್ ಸುಲಿಗೆಕೋರರ ಬಂಧನ

ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ, ಕಾವೇರಿಪುರದ ಬಳಿ ನಡೆದುಕೊಂಡು ಹೋಗುತ್ತಿರುವ ವ್ಯಕ್ತಿಯಿಂದ ಫೋನ್ ದೋಚಿದ ಕಳ್ಳರ ಬಂಧನವಾಗಿದೆ.
ಇಬ್ಬರು ಕಳ್ಳರು ಒನ್‌ಪ್ಲಸ್ ಕಂಪನಿಯ ಮೊಬೈಲ್ ಫೋನನ್ನು ಕಿತ್ತುಕೊಂಡು ಪರಾರಿಯಾಗಿರುತ್ತಾರೆಂದು ನೀಡಿದ ದೂರಿನ ಅನ್ವಯ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ಪೊಲೀಸರು ಜುಲೈ 18ರಂದು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ, ಅವರಿಂದ ಸುಮಾರು ರೂ.1,60,000/-ಬೆಲೆ ಬಾಳುವ ಒಟ್ಟು 08 ಮೊಬೈಲ್ ಮೋನ್‌ಗಳನ್ನು ವಶಪಡಿಸಿಕೊಂಡಿರುತ್ತಾರೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲಕ್ಷ್ಮಣ್, ನಿಂಬರ್ಗಿ ಸೂಕ್ತ ಮಾರ್ಗದರ್ಶನದಲ್ಲಿ ವಿಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಪಿ.ರವಿ ರವರ ನಿರ್ದೇಶನದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್
ಲೋಹಿತ್,ಬಿ.ಎನ್ ರವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw