ಮಾದಕವಸ್ತು ಕಳ್ಳಸಾಗಣೆ ವಿರುದ್ಧ ಕಹಳೆ: ಇಬ್ಬರು ಪಾಕಿಸ್ತಾನಿ ಪ್ರಜೆ ಅಂದರ್ - Mahanayaka

ಮಾದಕವಸ್ತು ಕಳ್ಳಸಾಗಣೆ ವಿರುದ್ಧ ಕಹಳೆ: ಇಬ್ಬರು ಪಾಕಿಸ್ತಾನಿ ಪ್ರಜೆ ಅಂದರ್

21/08/2023


Provided by

ಚಂಡಿಗಢದಲ್ಲಿ ಮಾದಕವಸ್ತು ಕಳ್ಳಸಾಗಣೆ ಜಾಲಗಳ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಲಾಗಿದೆ 29 ಕೆಜಿ ಹೆರಾಯಿನನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಪಂಜಾಬ್ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಗಡಿಯಲ್ಲಿ ನಡೆಯುವ ಮಾದಕವಸ್ತು ಕಳ್ಳಸಾಗಣೆ ಜಾಲಗಳ ವಿರುದ್ಧ ಗಡಿ ಭದ್ರತಾ ಪಡೆ (ಬಿಎಸ್ ಎಫ್) ಮತ್ತು ಪಂಜಾಬ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

29 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಕಾರ್ಯಾಚರಣೆ ವೇಳೆ ಕಳ್ಳಸಾಗಣೆದಾರರು ಹಾಗೂ ಪೊಲೀಸ್ ಪಡೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಪಾಕಿಸ್ತಾನದ ಪ್ರಜೆ ಗಾಯವಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ