ಕೆರೆಯ ಮೀನು ಸೇವಿಸಿ ಇಬ್ಬರು ಸಾವು, 15ಕ್ಕೂ ಅಧಿಕ ಜನರು ಅಸ್ವಸ್ಥ

ಹಾಸನ: ಕೆರೆಯ ಮೀನು ಸೇವಿಸಿ ಇಬ್ಬರು ಮೃತಪಟ್ಟು, 15ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.
ಬಸವಹಳ್ಳಿ ಗ್ರಾಮದ ರವಿಕುಮಾರ್ (46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಬಸವನಹಳ್ಳಿ ಗ್ರಾಮದ ಕೆರೆ ನೀರಿಲ್ಲದೆ ಬತ್ತಿ ಹೋಗಿದೆ. ಖಾಲಿಯಾಗಿದ್ದ ಕೆರೆಯ ಕೆಸರಿನಲ್ಲಿದ್ದ ಮೀನುಗಳನ್ನ ಹಿಡಿದ ಗ್ರಾಮಸ್ಥರು, ಮೀನು ಅಡುಗೆ ಮಾಡಿ ಊಟ ಮಾಡಿದ್ದಾರೆ.
ಊಟದ ನಂತರ ವಾಂತಿ, ಭೇದಿಯಾಗಿದ್ದು, 15ಕ್ಕೂ ಅಧಿಕ ಜನರು ಅಸ್ವಸ್ಥಗೊಂಡು ಇಬ್ಬರು ಮೃತಪಟ್ಟಿದ್ದಾರೆ. ಮೃತರ ಪೈಕಿ ಪುಟ್ಟಮ್ಮ ಬಸವನಹಳ್ಳಿ ಗ್ರಾಮದಲ್ಲಿರುವ ತವರು ಮನೆಗೆ ಬಂದಿದ್ದರು. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth