ಮಾದಕ ವಸ್ತು ಎಂಡಿಎಂಎನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಅರೆಸ್ಟ್

ಮಾದಕ ವಸ್ತು ಎಂಡಿಎಂಎನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರು ನಗರ ಹೊರವಲಯದ ಪಡುಶೆಡ್ಡೆ ಗ್ರಾಮದ ಮೂಡುಶೆಡ್ಡೆಯ ಬಳಿ ನಡೆದಿದೆ.
ಬಂಧಿತರನ್ನು ಶಾರೂಕ್ (27) ಮತ್ತು ಜಗದೀಶ್ (45) ಎಂದು ಗುರುತಿಸಲಾಗಿದೆ. ಇವರಿಂದ 4.5 ಗ್ರಾಂ ಎಂಡಿಎಂಎ, ಮೂರು ಮಾರಕ ಆಯುಧಗಳು, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಲಾಗಿದೆ.
ಇದರ ಮೌಲ್ಯ 4,41,700 ರೂಪಾಯಿ ಎಂದು ಅಂದಾಜಿಸಲಾಗಿದೆ. ಇವರು ಮೂಡುಶೆಡ್ಡೆಗೆ ಹೋಗುವ ದಾರಿಯಲ್ಲಿ ನಿಂತು ಎಂಡಿಎಂಎಯನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಾವೂರು ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಪರಿಶೀಲಿಸಿದಾಗ ಕಾರಿನಲ್ಲಿ ಮಾರಕ ಆಯುಧಗಳು ಕೂಡ ಕಂಡು ಬಂದಿವೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw