ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿಗಳು ಅಮೆರಿಕದಲ್ಲಿ ಕಾರು ಅಪಘಾತಕ್ಕೆ ಬಲಿ!

ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಕಳೆದ ವಾರ ಅಮೆರಿಕದ ಲ್ಯಾಂಕಾಸ್ಟರ್ ಕೌಂಟಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸೌರವ್ ಪ್ರಭಾಕರ್(23) ಹಾಗೂ ಮಾನವ್ ಪಟೇಲ್(20) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮೃತರು ಓಹಿಯೋದ ಕ್ಲೀವ್ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯ ವಿದ್ಯಾರ್ಥಿಗಳಾಗಿದ್ದರು. ಮೇ 10 ರಂದು ಲ್ಯಾಂಕಾಸ್ಟರ್ ಕೌಂಟಿಯ ಪೆನ್ಸಿಲ್ವೇನಿಯಾ ಟರ್ನ್ಪೈಕ್ ನಲ್ಲಿ ಇವರು ಪ್ರಯಾಣಿಸುತ್ತಿದ್ದ ಕಾರು ಮರವೊಂದಕ್ಕೆ ಡಿಕ್ಕಿ ಹೊಡೆದು ಬಳಿಕ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೌರವ್ ಪ್ರಭಾಕರ್ ವಾಹನ ಚಲಿಸುತ್ತಿದ್ದು, ಮಾನವ್ ಪಾಟೀಲ್ ಈತನ ಜೊತೆಗೆ ಪ್ರಯಾಣಿಸುತ್ತಿದ್ದ. ವರದಿಗಳ ಪ್ರಕಾರ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರು. ಇವರ ಜೊತೆಗೆ ಮತ್ತೊಬ್ಬ ಅಪರಿಚಿತ ವ್ಯಕ್ತಿ ಕೂಡ ಇದ್ದು, ಆತನಿಗೆ ಗಂಭೀರವಾಗಿ ಗಾಯವಾಗಿದ್ದು, ಆತನನ್ನು ರೀಡಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD