10:21 AM Wednesday 22 - October 2025

SSLC, PUCಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ: ಸಚಿವ ಜಮೀರ್ ಘೋಷಣೆ

zamir ahamad
29/07/2024

ಬೆಂಗಳೂರು: SSLC, PUCಯಲ್ಲಿ ಹೆಚ್ಚು ಅಂಕಗಳನ್ನು ಕಳಿಸುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಎಸ್​ಎಸ್​ಎಲ್​ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ 32 ಜನ ವಿದ್ಯಾರ್ಥಿಗಳಿಗೆ ನನ್ನ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ. ಸ್ಥಳೀಯ ಏಜನ್ಸಿಗಳ ಮೂಲಕ ಅರ್ಹ ವಿಧ್ಯಾರ್ಥಿಗಳ ಮನೆಗಳಿಗೆ ವಾಹನ ತಲುಪಿಸುತ್ತೇವೆ ಎಂದು ಘೋಷಿಸಿದರು.

ಮುಂದೆ ನಾನು ಮಂತ್ರಿ ಆಗ್ತಿನೋ, ಇರ್ತಿನೋ ಗೊತ್ತಿಲ್ಲ. ಈಗ ನನ್ನನ್ನ ಅಲ್ಪಸಂಖ್ಯಾತ ಸಚಿವರಾಗಿ ಮಾಡಿದ್ದಾರೆ. ಮುಂದಿನ ನಾಲ್ಕು ವರ್ಷ ನಮ್ಮ ಸರ್ಕಾರ ಇರುತ್ತದೆ. ನಾನೇ ಅಲ್ಪ ಸಂಖ್ಯಾತ ಮಂತ್ರಿ ಆಗಿ ಇರ್ತಿನಿ ಅಂತ ವಿಶ್ವಾಸವಿದೆ ಎಂದು ಅವರು ಇದೇ ವೇಳೆ ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version