ತಪಾಸಣೆ ವೇಳೆ ಸಿಕ್ಕಿ ಬಿದ್ದ ದ್ವಿಚಕ್ರ ವಾಹನ ಕಳ್ಳ: ವಾಹನ ಸಹಿತ ಆರೋಪಿಯ ಬಂಧನ

prahlad
30/03/2024

ಬಜ್ಪೆ:  ಟಿವಿಎಸ್ ಸ್ಕೂಟಿಯನ್ನು ಕಳವು ಮಾಡಿ ಚಲಾಯಿಸುತ್ತಿದ್ದ ಆರೋಪಿಯೋರ್ವನನ್ನು  ಬಜ್ಪೆ ಪೊಲೀಸರು ಬಂಧಿಸಿದ್ದು, ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.

ಕುಂದಾಪುರ ಸಾಸ್ತಾನ ಹೈರೋಡಿ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್(30) ಬಂಧಿತ ಆರೋಪಿಯಾಗಿದ್ದಾನೆ. ಮಾರ್ಚ್ 28ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಎಸ್ ಐ ರಾಮ ಪೂಜಾರಿ ಹಾಗೂ ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಪ್ರಹ್ಲಾದ್ ನನ್ನು ವಿಚಾರಿಸಿದಾಗ ಸರಿಯಾದ ದಾಖಲೆ ನೀಡಲು ಆರೋಪಿ ವಿಫಲನಾಗಿದ್ದಾನೆ.

ಆರೋಪಿಯನ್ನು ಪೊಲೀಸರು ಇನ್ನಷ್ಟು ವಿಚಾರಿಸಿದ ವೇಳೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿಂದ ಈ ವಾಹನವನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಆರೋಪಿಯ ವಿರುದ್ಧ ಈಗಾಗಲೇ ಕುಂದಾಪುರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ, ಕೋಟ ಪೊಲೀಸ್ ಠಾಣೆ, ಬ್ರಹ್ಮಾವರ, ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣ ದಾಖಲಾಗಿದೆ. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಆರೋಪಿಯನ್ನು ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version