ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದ ಇಬ್ಬರು ಮಹಿಳೆಯರು: ವಿಡಿಯೋ ವೈರಲ್

ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಮಂಗಳೂರು ನಗರದ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ನಡೆದಿದೆ. ಇದ್ರ ಸಿಸಿಟಿವಿ ವೀಡಿಯೋ ವೈರಲ್ ಆಗಿದೆ.
ಮಂಗಳೂರು ಮುಡಿಪುವಿಗೆ ಚಲಿಸುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ.
ಈ ವೇಳೆ ಹಿಂದಿನಿಂದ ಬಸ್ ಬರುತ್ತಿತ್ತು. ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಳಿಕ ಎಲ್ಲರೂ ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿ ಕೊಟ್ಟಿದ್ದಾರೆ. ಈ ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಚಾಲಕನ ಸಮಯಪ್ರಜ್ಞೆಗೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw