ಡ್ಯಾಂ ಬಳಿ ಗಾಂಜಾ ಮಾರಾಟಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಯುವಕರು ಅರೆಸ್ಟ್!

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ಹೊರವಲಯದ ಮೂಡುಶೆಡ್ಡೆ ಫಲ್ಗುಣಿ ನದಿ ತೀರದ ಅದ್ಯಪಾಡಿ ಡ್ಯಾಮ್ ಬಳಿ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಲಕ್ಕನಹಳ್ಳಿ ನಿವಾಸಿ 19 ವರ್ಷದ ಶಾಹಿಲ್, 21ವರ್ಷದ ಪಿ. ಮನ್ಸೂರ್ ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರಿಂದ 3 ಲಕ್ಷ ರೂಪಾಯಿ ಮೌಲ್ಯದ 10 ಕೆಜಿ 12 ಗ್ರಾಂ ತೂಕದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ಮೂಡುಶೆಡ್ಡೆ ಗ್ರಾಮದ ಫಲ್ಗುಣಿ ನದಿಯ ಅದ್ಯಪಾಡಿ ಡ್ಯಾಂನ ಬಳಿ ಗಾಂಜಾ ಮಾರಾಟಕ್ಕೆ ಹೊಂಚು ಹಾಕುತ್ತಿದ್ದರು.
ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಕಾವೂರು ಪೊಲೀಸ್ ಠಾಣಾ ಪೊಲೀಸರು ಆರೋಪಿತರನ್ನು ಬಂಧಿಸಿ ಗಾಂಜಾವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರ ವಿಚಾರಣೆ ನಡೆಯುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw