7:05 PM Saturday 18 - October 2025

ಯುಪಿ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ; ಗೋರಖ್ ಪುರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

adhithya
15/01/2022

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್ ಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪಟ್ಟಿಯಲ್ಲಿ ಮೊದಲ ಹೆಸರು ಯೋಗಿ ಆದಿತ್ಯನಾಥ್ ಅವರದ್ದು, ಅವರು ಗೋರಖ್‌ಪುರ ನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಪ್ರಯಾಗರಾಜ್ ಜಿಲ್ಲೆಯ ಸಿರಾಥುದಿಂದ ಯುಪಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಮತ್ತೊಬ್ಬ ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ಕೂಡ ಲಖನೌ ಕ್ಷೇತ್ರದಿಂದ ಕಣದಲ್ಲಿದ್ದಾರೆ ಎಂದು ಅರುಣ್​ ಸಿಂಗ್ ಪ್ರಕಟಿಸಿದ್ದಾರೆ.

ಮೊದಲ ಹಂತಕ್ಕೆ 57 ಅಭ್ಯರ್ಥಿಗಳು ಮತ್ತು ಎರಡನೇ ಹಂತಕ್ಕೆ 48 ಅಭ್ಯರ್ಥಿಗಳನ್ನು ಘೋಷಿಸಲಾಗುತ್ತಿದೆ ಎಂದು ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದರು. ಸಾಮಾನ್ಯ ಸ್ಥಾನದಲ್ಲೂ ಪರಿಶಿಷ್ಟ ಜಾತಿಗೆ ಸೇರಿದವರೇ ಸ್ಪರ್ಧಿಸಲಿದ್ದಾರೆ ಎಂದು ಇದೇ ವೇಳೆ ಅವರು ಘೋಷಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಜೆಪಿ ವಿಕೆಟ್‌ಗಳು ಪತನ: ಬಾಬಾ ಸಿಎಂಗೆ ಕ್ರಿಕೆಟ್ ಆಡಲು ಬರಲ್ಲ; ಅಖಿಲೇಶ್ ಯಾದವ್ ಲೇವಡಿ

ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ

ಜಲ್ಲಿಕಟ್ಟು ಸ್ಪರ್ಧೆ: ಓರ್ವ ಸಾವು, 80 ಮಂದಿಗೆ ಗಾಯ

ಯುವಕನ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸಿಡಿಎಸ್‌ ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತ: ಅಂತಿಮ ತನಿಖಾ ವರದಿ ಬಹಿರಂಗ

 

ಇತ್ತೀಚಿನ ಸುದ್ದಿ

Exit mobile version