ರಾಜಭವನ ಸ್ಪೀಕರ್ ಭೇಟಿ: ವಿಧಾನಸಭೆಯಲ್ಲಿ ನಡೆದ ಘಟನೆ ಬಗ್ಗೆ ರಾಜ್ಯಪಾಲರಿಗೆ ವಿವರ ತಿಳಿಸಿದ ಯು.ಟಿ.ಖಾದರ್

ut kadar
20/07/2023

ಬೆಂಗಳೂರು: ಗುರುವಾರ ಬೆಳಗ್ಗೆ ರಾಜಭವನಕ್ಕೆ ತೆರಳಿದ ಸ್ಪೀಕರ್ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.
ಭೇಟಿಯಲ್ಲಿ ಬುಧವಾರ ಸದನದಲ್ಲಿ ನಡೆದ ಘಟನೆಗಳ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆನ್ನಲಾಗಿದೆ.

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಉಪ ಸಭಾಧ್ಯಕ್ಷರಿಗೆ ಅಗೌರವ ತೋರಿಸಿದ ಘಟನೆ ಹಾಗೂ ಹತ್ತು ಶಾಸಕರ ಅಮಾನತು ವಿಚಾರವಾಗಿ ಸ್ಪೀಕರ್ ಯು.ಟಿ ಖಾದರ್ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ವಿವರ ನೀಡಿದ್ದಾರೆ.

ಹತ್ತು ಶಾಸಕರ ಅಮಾನತು ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಬಿಜೆಪಿ ತೀವ್ರ ಪ್ರತಿಭಟನೆ ನಡೆಸಿತ್ತು. ಈಗಾಗಲೇ ಸ್ಪೀಕರ್ ಖಾದರ್ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್ ನೀಡಿದ್ದಾರೆ.

ಶಾಸಕರ ಅಮಾನತು ಹಿನ್ನಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸದನಕ್ಕೆ ಹಾಜರಾಗಿಲ್ಲ. ಸದನ ಆರಂಭಗೊಂಡರೂ ಯಾರೂ ಕೂಡಾ ಸದನಕ್ಕೆ ಬಂದಿಲ್ಲ. ಬದಲಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡಲು ಬಿಜೆಪಿ ನಿರ್ಧಾರ ಮಾಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version