ಕೃಷಿ ವಿಶ್ವವಿದ್ಯಾಲಯದಲ್ಲಿ ನೇರ ನೇಮಕಾತಿಗೆ ಅರ್ಜಿ ಆಹ್ವಾನ - Mahanayaka
6:28 PM Wednesday 17 - September 2025

ಕೃಷಿ ವಿಶ್ವವಿದ್ಯಾಲಯದಲ್ಲಿ ನೇರ ನೇಮಕಾತಿಗೆ ಅರ್ಜಿ ಆಹ್ವಾನ

uas dharwad recruitment
06/11/2024

UAS Dharwad Recruitment 2024: ಧಾರವಾಡದಲ್ಲಿರುವ ಕೃಷಿ ವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಪ್ರಾದ್ಯಾಪಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.


Provided by

Assistant Professor Jobs in UAS Dharwad – ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಹುದ್ದೆಗಳ ವಿವರ ಹಾಗೂ ಶೈಕ್ಷಣಿಕ ಅರ್ಹತೆ:

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ವಿವಿಧ ವಿಭಾಗದ ಒಟ್ಟು 75 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ಮಾಸಿಕ ವೇತನ: ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹40,000ರೂ. ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:  ಅರ್ಜಿ ಸಲ್ಲಿಸಿದಂತಹ ಅರ್ಹ ಅಭ್ಯರ್ಥಿಗಳಿಗೆ ಇದೆ ನವೆಂಬರ್ 12, 2024 ರಿಂದ ನವೆಂಬರ್ 26ರವರೆಗೆ ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಕೆ ಹೇಗೆ?

ಅರ್ಹರಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಜಾಲತಾಣಕ್ಕೆ ಭೇಟಿ ನೀಡಿ, ಅಧಿಸೂಚನೆಯನ್ನು ಒಮ್ಮೆ ಪರಿಶೀಲಿಸಿ, ಅದೇ ಜಾಲತಾಣದಲ್ಲಿ ಸಿಗುವ ಅರ್ಜಿ ನಮೂನೆ ಡೌನ್ಲೋಡ್ ಮಾಡಿ, ಅಗತ್ಯ ಮಾಹಿತಿ ಭರ್ತಿ ಮಾಡಿ ನೇರ ಸಂದರ್ಶನಕ್ಕೆ ತೆಗೆದುಕೊಂಡು ಹೋಗಬೇಕು.

ಅರ್ಜಿ ನಮೂನೆಗೆ ಅಧಿಕೃತ ಜಾಲತಾಣ: https://uasd.edu/call-for-application-for-teaching-positions-at-uas-dharwad/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ