2:33 AM Wednesday 15 - October 2025

ಉಚಿತ ಕೊರೊನಾ ಲಸಿಕೆ ನೀಡುತ್ತೇವೆ ಎಂದು ನಾವು ಹೇಳಿಯೇ ಇಲ್ಲ | ಉಲ್ಟಾ ಹೊಡೆದ ಕೇಂದ್ರ ಸರ್ಕಾರ

02/12/2020

ನವದೆಹಲಿ:  “ಇಡೀ ದೇಶಕ್ಕೆ ಕೊರೊನಾ ಲಸಿಕೆ ಉಚಿತವಾಗಿ ನೀಡುತ್ತಾರೆ” ಎಂದು ಬಿಜೆಪಿ ನಾಯಕರು ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿದ್ದರೆ, ಇತ್ತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ “ನಾವು ಹೀಗೆ ಹೇಳಿಯೇ ಇಲ್ಲ” ಎಂದು ಹೇಳಿದೆ.

ಬಿಹಾರ ವಿದಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಬಿಡುಗಡೆಗೊಳಿಸಿದ ಚುನಾವಣಾ ಪ್ರಣಾಳಿಕೆಯಲ್ಲಿ ಉಚಿತ ಕೊವಿಡ್ ಲಸಿಕೆಯೂ ಸೇರಿದೆ.  ಆದರೆ ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯ ನಾವು ಹೀಗೆ ಹೇಳಿಯೇ ಇಲ್ಲ, ಬೇಕಾಬಿಟ್ಟಿಯಾಗಿ ಮಾತನಾಡುವುದು ಬಿಟ್ಟು ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕು ಎಂದು ಹೇಳಿದೆ.


ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್, “ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅಂತಹ ವೈಜ್ಞಾನಿಕ ವಿಚಾರಗಳನ್ನು ವಾಸ್ತವ ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕೆ ಹೊರತು ಒಟ್ಟಾರೆಯಾಗಿ ಮಾತನಾಡಬಾರದು’ ಎಂದು ಹೇಳಿಕೆ  ನೀಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version