ತಮಿಳುನಾಡು ಸಿಎಂ ಪುತ್ರ, ನಟ ಪುತ್ರ ಉದಯನಿಧಿ ಸ್ಟಾಲಿನ್ ಗೆ ಶೀಘ್ರವೇ ಸಚಿವ ಸ್ಥಾನ!
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ, ಶಾಸಕ ಉದಯನಿಧಿ ಸ್ಟಾಲಿನ್ ಅವರು ಮುಂದಿನ ವಾರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ವರದಿಯಾಗಿದೆ.
ಚೆಪಾಕ್-ತಿರುವಲ್ಲಿಕೇನಿ ಕ್ಷೇತ್ರದ ಶಾಸಕರಾಗಿರುವ ಉದಯನಿಧಿ ಅವರು, ಚಿತ್ರನಟರೂ ಆಗಿರುವುದರಿಂದ ರಾಜ್ಯಾದ್ಯಂತ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ.
ಸದ್ಯ ಡಿಎಂಕೆ ಯುವ ಘಟಕದ ರಾಜ್ಯ ಕಾರ್ಯದರ್ಶಿ ಆಗಿರುವ ಉದಯನಿಧಿ ಅವರು, ಗ್ರಾಮೀಣಾಭಿವೃದ್ಧಿ ಹಾಗೂ ವಿಶೇಷ ಕಾರ್ಯಕ್ರಮ ಖಾತೆಯ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಬಹುದು ಎಂದು ಎನ್ ಡಿ ಟಿವಿ ವರದಿ ಮಾಡಿದೆ.
ಕಳೆದ ವರ್ಷ ನಡೆದ ತಮಿಳುನಾಡು ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿದ್ದ ಉದಯನಿಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka