ಕೊನೆ ಕ್ಷಣದಲ್ಲಿ ಬಚಾವ್ ಆದ್ರಾ ಅರ್ನಾಬ್ ಗೋಸ್ವಾಮಿ? | ಮಹಾರಾಷ್ಟ್ರ ಸಿಎಂ ನಡೆಯ ಬಗ್ಗೆ ಅಚ್ಚರಿ! - Mahanayaka

ಕೊನೆ ಕ್ಷಣದಲ್ಲಿ ಬಚಾವ್ ಆದ್ರಾ ಅರ್ನಾಬ್ ಗೋಸ್ವಾಮಿ? | ಮಹಾರಾಷ್ಟ್ರ ಸಿಎಂ ನಡೆಯ ಬಗ್ಗೆ ಅಚ್ಚರಿ!

22/10/2020

ಮುಂಬೈ: ಮಹಾರಾಷ್ಟ್ರ ಸರ್ಕಾರವು ಟಿಆರ್​ಪಿ ಹಗರಣದ ಪ್ರಕರಣಗಳ ತನಿಖೆ ನಡೆಸಲು ಕೇಂದ್ರ ತನಿಖಾ ದಳಕ್ಕೆ (ಸಿಬಿಐ)ನೀಡಿದ್ದ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳುವ ಮೂಲಕ ಅಚ್ಚರಿ ಸೃಷ್ಟಿಸಿದೆ.

ರಿಪಬ್ಲಿಕ್ ಟಿವಿ ಹಣ ನೀಡಿ ಟಿಆರ್​​ಪಿ ತಿರುಚಿದ ಪ್ರಕರಣ ಸದ್ಯ ದೇಶಾದ್ಯಂತ ಸುದ್ದಿಯಲ್ಲಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರವು  ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಈ ಸಂಬಂಧ ಸಿಬಿಐ ಎಫ್ ಐಆರ್  ಕೂಡ ದಾಖಲಿಸಿದೆ. ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರದ ಉಪ ಕಾರ್ಯದರ್ಶಿ ಕೈಲಾಸ್ ಗಾಯಕ್​ವಾಡ್​ ಹೊರಡಿಸಿದ ಆದೇಶದಲ್ಲಿ, ದೆಹಲಿ ವಿಶೇಷ ಪೊಲೀಸ್ ಸ್ಥಾಪನಾ ಕಾಯ್ದೆ 1956 ರ ಸೆಕ್ಷನ್ 6 ರ ಪ್ರಕಾರ ಅಧಿಕಾರವನ್ನು ಚಲಾಯಿಸುವಾಗ ಮಹಾರಾಷ್ಟ್ರ ಸರ್ಕಾರವು ದೆಹಲಿ ವಿಶೇಷ ಪೊಲೀಸ್ ಪಡೆಯ (ಸಿಬಿಐ) ಸದಸ್ಯರಿಗೆ ನೀಡಿದ್ದ ಒಪ್ಪಿಗೆಯನ್ನು ಹಿಂಪಡೆಯುತ್ತದೆ ಎಂದು ಹೇಳಲಾಗಿದೆ.

ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಸಂಪಾದಕ 46 ವರ್ಷದ ಅರ್ನಾಬ್ ಗೋಸ್ವಾಮಿ ಬಂಧನದ ಭೀತಿ ಎದುರಿಸುತ್ತಿದ್ದರು. ಈ ನಡುವೆ ಇಂತಹದ್ದೊಂದು ವಿದ್ಯಮಾನ ನಡೆದಿದೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಈ ನಿಲುವು ಇದೀಗ ರಾಷ್ಟ್ರಾದ್ಯಂತ ಚರ್ಚೆಗೀಡಾಗಿದೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ