ಉಡುಪಿ: ನೀರು ಸೇದುತ್ತಿದ್ದಾಗ ತಾಯಿಯ ಕೈಯಿಂದ ಬಾವಿಗೆ ಬಿದ್ದ ಮಗು ಸಾವು
ಉಡುಪಿ: ನೀರು ಸೇದುತ್ತಿದ್ದಾಗ ತಾಯಿಯ ಕೈಯಿಂದ ಆಯತಪ್ಪಿ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ನಡೆದಿದೆ.
ಮೃತ ಮಗುವನ್ನು ಕೀರ್ತನಾ ಎಂದು ಗುರುತಿಸಲಾಗಿದೆ. ಮಗುವಿನ ತಾಯಿ ನಯನಾ ಕರ್ಕಡ ಅವರು ಮನೆ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಆಯತಪ್ಪಿದ ಮಗು ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದಿದೆ. ಕೂಡಲೇ ತಾಯಿ ನಯನಾ ಅವರು ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಮಗುವನ್ನು ಹೊರತೆಗೆದರಾದರೂ, ಅದಾಗಲೇ ಮಗು ಮೃತಪಟ್ಟಿತ್ತು.
ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣಾ ಪಿಎಸ್ ಐ ಭರತೇಶ್ ಕಂಕಣವಾಡಿ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























