ಆಡಿಯೋ ವೈರಲ್ ವಿಚಾರ: ಮನೆಗೆ ನುಗ್ಗಿ ಸ್ನೇಹಿತನನ್ನೇ ಕೊಂದರು!

ಉಡುಪಿ: ಆಡಿಯೋ ವೈರಲ್ ಮಾಡಿದ ಕಾರಣಕ್ಕಾಗಿ ವ್ಯಕ್ತಿಯೊಬ್ಬನನ್ನು ಸ್ನೇಹಿತರೇ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಉಡುಪಿ ತಾಲೂಕಿನ ಪುತ್ತೂರಿನಲ್ಲಿ ನಡೆದಿದೆ.
ವಿನಯ್ ದೇವಾಡಿಗ(40) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳಾದ ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿ ನಗರ ನಿವಾಸಿಗಳಾದ ಅಜಿತ್(28), ಅಕ್ಷೇಂದ್ರ(34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಎಂಬವರು ಪೊಲೀಸರಿಗೆ ಶರಣಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ರಾತ್ರಿ ವೇಳೆ ವಿನಯ್ ದೇವಾಡಿಗ ಅವರ ಮನೆಗೆ ನುಗ್ಗಿದ ಆರೋಪಿಗಳು ಮಚ್ಚು ಹಾಗೂ ಚಾಕುವಿನಿಂದ ಬರ್ಬರವಾಗಿ ಹಲ್ಲೆ ನಡೆಸಿ ವಿನಯ್ ನನ್ನು ಹತ್ಯೆ ಮಾಡಿದ್ದಾರೆ. ಈ ವೇಳೆ ತಡೆಯಲು ಬಂದ ವಿನಯ್ ಪತ್ನಿಗೆ ಕೂಡ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಆರೋಪಿ ಅಕ್ಷೇಂದ್ರನಿಗೆ ಜೀವನ್ ಎಂಬಾತ ಬೈದಿರುವ ಆಡಿಯೋವನ್ನು ವಿನಯ್ ದೇವಾಡಿಗ ಬೇರೆಯವರಿಗೆ ಶೇರ್ ಮಾಡಿ ವೈರಲ್ ಮಾಡಿರುವುದು ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಉಡುಪಿ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD