4:50 PM Saturday 25 - October 2025

ಉಡುಪಿ: ವಿಡಿಯೋ ಚಿತ್ರೀಕರಣ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ

bjp
28/07/2023

ಖಾಸಗಿ ಕಾಲೇಜಿನಲ್ಲಿ ಹಿಂದೂ ಯುವತಿಯ ವಿಡಿಯೋ ಚಿತ್ರೀಕರಣ ಘಟನೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಹಮ್ಮಿಕೊಂಡ ಬೃಹತ್ ಪ್ರತಿಭಟನೆಗೆ ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ಚಾಲನೆ ನೀಡಲಾಯಿತು.

ಕಡಿಯಾಳಿ ಬಿಜೆಪಿ ಕಚೇರಿಯಿಂದ ಆರಂಭಗೊಂಡ ಪ್ರತಿಭಟನೆ ಕಲ್ಸಂಕ, ಸಿಟಿಬಸ್ ನಿಲ್ದಾಣ ಹಾಗೂ ಬನ್ನಂಜೆ ಮೂಲಕ ಸಾಗಿ ಎಸ್ಪಿ ಕಚೇರಿ ಮುಂದೆ ಮುಕ್ತಾಯಗೊಂಡಿತು‌.

ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು‌‌ . ವಿಡಿಯೋ ಮಾಡಿರುವ ಮೂವರು ಮುಸ್ಲಿಮ್ ವಿದ್ಯಾರ್ಥಿಗಳನ್ನು ಬಂಧಿಸಿ ಸೂಕ್ತ ಕ್ರಮಕೈಗೊಳ್ಳಬೇಕು. ಸಂತ್ರಸ್ತ ಯುವತಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version