ಉಡುಪಿ—ಚಿಕ್ಕಮಗಳೂರು ಕ್ಷೇತ್ರ: ಜಯಪ್ರಕಾಶ್ ಹೆಗ್ಡೆ ಕೈ ಅಭ್ಯರ್ಥಿಯಾಗೋದು ಬಹುತೇಕ ಖಚಿತ

ಚಿಕ್ಕಮಗಳೂರು : ಉಡುಪಿ—ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಭರ್ಜರಿಯಾಗಿಯೇ ನಡೆಯುತ್ತಿದೆ. ಈ ನಡುವೆ ಜಯಪ್ರಕಾಶ್ ಹೆಗ್ಡೆ ಕೈ ಅಭ್ಯರ್ಥಿಯಾಗೋದು ಬಹುತೇಕ ಖಚಿತವಾಗಿದೆ.
ಉಡುಪಿ ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಬಹುತೇಕ ಫಿಕ್ಸ್ ಆಗಿದೆ. ಕೈ ಅಭ್ಯರ್ಥಿಯಾಗಿ ಹೆಗ್ಡೆ ಬಹುತೇಕ ಖಚಿತ ಎಂದು ಹೇಳಲಾಗಿದೆ. ಇನ್ನೂ ಬಿಜೆಪಿಯಲ್ಲಿ ಶೋಭಾ ವಿರುದ್ಧ ಬಿಜೆಪಿ ಕಾರ್ಯಕರ್ತರು ಫುಲ್ ರೆಬೆಲ್ ಆಗಿದ್ದಾರೆ. ಶೋಭಾ ಕರಂದ್ಲಾಜೆ ಮೇಲೆ ರಾಜ್ಯ ಬಿಜೆಪಿ ನಾಯಕ್ ಕೃಪಾಕಟಾಕ್ಷ ಇರುವುದರಿಂದ ಶೋಭಾ ಕರಂದ್ಲಾಜೆ ಅವರೇ ಈ ಬಾರಿಯೂ ಅಭ್ಯರ್ಥಿ ಎನ್ನಲಾಗ್ತಿದೆ.
ಇಂದು ಸಂಜೆ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇಪರ್ಡೆಯಾಗಲಿದ್ದಾರೆ. ಸಂಜೆ 4 ಗಂಟೆಗೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಜಯಪ್ರಕಾಶ್ ಹೆಗ್ಡೆ ಹೆಸರಲ್ಲಿ ಕಾಂಗ್ರೆಸ್ ಮುಖಂಡರು ಪೋಸ್ಟ್ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು–ಉಡುಪಿ ಒಂದು ಭಾರಿ ಸಂಸದರಾಗಿದ್ದ ಜಯಪ್ರಕಾಶ್ ಹೆಗ್ಡೆ, 2012ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. 2014 ರಲ್ಲಿ ಶೋಭಾಕರಂದ್ಲಾಜೆ ವಿರುದ್ದ ಸೋಲು ಕಂಡಿದ್ದರು. ಇದೀಗ ಅದೇ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರನ್ನು ಎದುರಿಸಲಿದ್ದಾರೆ ಎನ್ನಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth