ಉಡುಪಿ: ಕಲ್ಸಂಕ ಜಂಕ್ಷನ್ ಬಳಿ ಭೀಕರ ಅಪಘಾತ; ಲಾರಿ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಸಾವು
ಉಡುಪಿ: ನಗರದ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಮಣಿಪಾಲದ ನಿವಾಸಿ ಅವಿನಾಶ್ (19) ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಉಡುಪಿಯಿಂದ ಮಣಿಪಾಲದ ಕಡೆಗೆ ಚಲಿಸುತ್ತಿದ್ದ ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಬಿದ್ದಿದ್ದು, ಈ ವೇಳೆ ಕಂಟೈನರ್ ಲಾರಿಯ ಚಕ್ರವು ಅವರ ತಲೆಯ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ. ತಲೆಗೆ ಗಂಭೀರವಾದ ಗಾಯಗಳಾದ ಪರಿಣಾಮ ಅವಿನಾಶ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























